ಸಾಂದರ್ಭಿಕ ಚಿತ್ರ
ಚಾಮರಾಜನಗರ: ತಾಲ್ಲೂಕಿನ ಬೇಡುಗುಳಿ ಸಮೀಪದ ರಾಮಯ್ಯನ ಪೋಡಿನಲ್ಲಿ ಸೋಮವಾರ ರಾತ್ರಿ ಹುಲಿ ದಾಳಿಗೆ ಹಾಡಿ ನಿವಾಸಿ ರವಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭ ಏಕಾಏಕಿ ಹುಲಿ ದಾಳಿ ಮಾಡಿದ್ದು ರವಿ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗೆ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.