ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವಲಯದಲ್ಲಿ ಮಂಗಳವಾರ ಹುಲಿಯೊಂದರ ಕಳೇಬರ ಪತ್ತೆಯಾಗಿದೆ.
‘ಬೈಲೂರು ವಲಯದ ಬೆಳ್ಳಾಜೆ ಬೀಟ್ ವ್ಯಾಪ್ತಿಯ ಅತ್ತಿಕಾನೆ ಕಾಫಿ ಎಸ್ಟೇಟ್‌ನಲ್ಲಿ ಮೃತದೇಹ ಕಂಡು ಬಂದಿದ್ದು, ಹುಲಿಯ ದೇಹದ ಎಲ್ಲ ಅಂಗಗಳೂ ಇವೆ. ದೇಹದಲ್ಲಿ ಗಾಯದ ಗುರುತುಗಳಿಲ್ಲ’ ಎಂದು ಬಿಆರ್‌ಟಿ ಡಿಸಿಎಫ್ ದೀಪ್ ಜೆ. ಕಾಂಟ್ರ್ಯಾಕ್ಟರ್ ಹೇಳಿದ್ದಾರೆ.
ಮರಣೋತ್ತರ ಪರೀಕ್ಷೆಯ ಬಳಿಕ ಇನ್ನಷ್ಟು ವಿವರಗಳು ತಿಳಿಯಲಿವೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.