ADVERTISEMENT

ಮಧುಮಲೆ: ಗಂಡು ಹುಲಿ ಸಾವು

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2019, 14:57 IST
Last Updated 29 ಅಕ್ಟೋಬರ್ 2019, 14:57 IST
ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪತ್ತೆಯಾಗಿರುವ ಹುಲಿಯ ಮೃತದೇಹ
ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪತ್ತೆಯಾಗಿರುವ ಹುಲಿಯ ಮೃತದೇಹ   

ಗುಂಡ್ಲುಪೇಟೆ: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವತಮಿಳುನಾಡಿನ ಮಧುಮಲೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ನೆಲೆಕೊಟ್ಟೈ ವಲಯದ ಪಾಟ್ಟವಯಲ್ ಬಳಿ 8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.

ಎರಡು ಮೂರು ದಿನಗಳ ಹಿಂದೆಯೇ ಹುಲಿ ಮೃತಪ‍ಟ್ಟಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಸಹಜ ಸಾವು ಎಂಬ ವರದಿ ಬಂದಿದೆ.

ಅರಣ್ಯದಲ್ಲಿ ಸಿಬ್ಬಂದಿ ಭಾನುವಾರ ಗಸ್ತು ತಿರುಗುವ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಅಲ್ಲಿನವಲಯ ಅರಣ್ಯಾಧಿಕಾರಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.