ADVERTISEMENT

ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಹುಲಿ ಹತ್ಯೆ: ನಾಲ್ವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 0:29 IST
Last Updated 6 ಅಕ್ಟೋಬರ್ 2025, 0:29 IST
<div class="paragraphs"><p>ಬಂಧನ </p></div>

ಬಂಧನ

   

ಹನೂರು (ಚಾಮರಾಜನಗರ ಜಿಲ್ಲೆ): ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಹುಲಿ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಪಚ್ಚೆಮಲ್ಲು, ಗಣೇಶ್, ಗೋವಿಂದೇಗೌಡ ಹಾಗೂ ಶಂಪು ಬಂಧಿತರು. ಆರೋಪಿಗಳನ್ನು ಭಾನುವಾರ ಕೊಳ್ಳೇಗಾಲದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಜೆಎಂಎಫ್‌ಸಿ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದರು.

ADVERTISEMENT

ಪ್ರತೀಕಾರದ ಹತ್ಯೆ:

‘ಕಾಡಿನಲ್ಲಿ ಮೇಯಲು ಹೋಗಿದ್ದ ಹಸುವನ್ನು ತಿಂದು ಹಾಕಿದ್ದಕ್ಕೆ ಪ್ರತೀಕಾರವಾಗಿ ಹುಲಿಗೆ ವಿಷಹಾಕಿ ಹತ್ಯೆ ಮಾಡಲಾಗಿದೆ’ ಎಂಬುದು ತನಿಖೆಯಿಂದ ತಿಳಿದುಬಂದಿದೆ.

‘ಹುಲಿ ಸತ್ತ ಬಳಿಕ ಪ್ರಕರಣ ಮುಚ್ಚಿಹಾಕಲು ಆರೋಪಿಗಳು ಕಳೇಬರವನ್ನು ಮೂರು ತುಂಡುಗಳಾಗಿ ಕತ್ತರಿಸಿ ಮುಚ್ಚಿಡಲು ಯತ್ನಿಸಿದ್ದರು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜುಲೈ 26ರಂದು ಇದೇ ಅರಣ್ಯದಲ್ಲಿ ಹಸು ಕೊಂದಿದ್ದಕ್ಕೆ ಪ್ರತೀಕಾರವಾಗಿ ಐದು ಹುಲಿಗಳಿಗೆ ವಿಷವಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ ಅದೇ ಮಾದರಿಯಲ್ಲಿ ಹುಲಿ ಹತ್ಯೆ ನಡೆದಿದೆ.

‘ಈ ಪ್ರಕರಣದಲ್ಲಿ ಹಲವರ ಕೈವಾಡದ ಶಂಕೆ ಇದ್ದು, ಅವರ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.