ಜಾಮೀನು
– ಎಐ ಚಿತ್ರ
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಈಚೆಗೆ ಐದು ಹುಲಿಗಳಿಗೆ ವಿಷವಿಕ್ಕಿ ಕೊಂದ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಾದ ಮಾದರಾಜು, ನಾಗರಾಜು, ಕೋನಪ್ಪಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಕೊಳ್ಳೇಗಾಲ) ಜಾಮೀನು ಮಂಜೂರು ಮಾಡಿದೆ.
₹50,000 ಭದ್ರತಾ ಠೇವಣಿಯೊಂದಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಅನುಮತಿ ಪಡೆಯದೆ ಸ್ವಸ್ಥಾನ ತೊರೆಯುವಂತಿಲ್ಲ, ನ್ಯಾಯಾಲಯದಲ್ಲಿ ನಿಯಮಿತವಾಗಿ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿದೆ.
ಮನವಿ:
ಮತ್ತೊಂದೆಡೆ ಹುಲಿಗಳ ಅಸಹಜ ಸಾವಿನ ತನಿಖೆ ಪೂರ್ಣಗೊಳಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಸರ್ಕಾರಿ ಅಭಿಯೋಜಕರ ಮೂಲಕ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಮಲೆ ಮಹದೇಶ್ವರ ವನ್ಯಜೀವಿ ವಿಭಾದ ಡಿಸಿಎಫ್ ಭಾಸ್ಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.