ಹುಲಿಗಳ ಪತ್ತೆ
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಗೊಳಪಡುವ ತಾಲ್ಲೂಕಿನ ನಂಜದೇವನಪುರ ಗ್ರಾಮದ ಜಮೀನಿನಲ್ಲಿ ಐದು ಹುಲಿಗಳು ಪತ್ತೆಯಾಗಿವೆ.
ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಸಮೀಪದ ಆನೆಮಡುವಿನ ಕೆರೆಯಲ್ಲಿ ನೀರು ಕುಡಿದು ತೆರಳುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಒಂದೇ ಜಾಗದಲ್ಲಿ ಐದು ಹುಲಿಗಳು ಕಾಣಿಸಿಕೊಂಡಿರುವುದರಿಂದ ನಂಜದೇವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಜನ ಜಾನುವಾರುಗಳ ಮೇಲೆ ದಾಳಿ ಮಾಡುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗಳನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹುಲಿ ಹಾಗೂ ಮರಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಅರಣ್ಯದೊಳಗೆ ಹಾಕಲಾಗಿರುವ ಟ್ರಾಪ್ ಕ್ಯಾಮೆರಾಗಳ ಪರಿಶೀಲನೆ ನಡೆಯುತ್ತಿದೆ. ಎನ್‌ಟಿಸಿಎ ಮಾರ್ಗಸೂಚಿಗಳಂತೆ ಎಸ್‌ಒಪಿ ಮಾನದಂಡಗಳ ಪ್ರಕಾರ ಹುಲಿಗಳ ಸೆರೆಗೆ ತಂಡ ರಚನೆ ಮಾಡಲಾಗುವುದು. ಎನ್‌ಟಿಸಿಎ ನಾಮನಿರ್ದೇಶಿತ ಸದಸ್ಯ, ಚೀಫ್ ವೈಲ್ಡ್ ಲೈಫ್ ವಾರ್ಡನ್, ಆರ್‌ಎಫ್‌ಒ ಹಾಗೂ ವೈದ್ಯರನ್ನೊಳಗೊಂಡ ತಂಡ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ ಎಂದು ಬಿಆರ್‌ಟಿ ಡಿಸಿಎಫ್ ಶ್ರೀಪತಿ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.