ಕೊಳ್ಳೇಗಾಲ: ತಾಲ್ಲೂಕಿನ ಹೊಂಡರಬಾಳು ಗ್ರಾಮದ ಸಿದ್ದೇಶ್ವರ ಬೆಟ್ಟದ ತಪ್ಪಲಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಮಧುವನಹಳ್ಳಿ ಹಾಗೂ ಹೊಂಡರಬಾಳು ಗ್ರಾಮಸ್ಥರು ಭಯಭೀತರಾಗಿ ಜಮೀನುಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ.
ಕಳೆದ 15 ದಿನಗಳ ಹಿಂದೆ ಇದೇ ಜಾಗದಲ್ಲಿ ಚಿರತೆಯೊಂದು ಕಾಣಿಸಿಕೊಂಡು ಮೇಯಲು ಹೋಗಿದ್ದ 15ಕ್ಕೂ ಕುರಿಮರಿಯನ್ನು ಕೊಂದಿತ್ತು. ಗ್ರಾಮಸ್ಥರ ಕೋರಿಕೆಯ ಮೇರೆಗೆ ಅರಣ್ಯ ಇಲಾಖೆಯವರು ಚಿರತೆಯನ್ನು ಸೆರೆ ಹಿಡಿದು ದಟ್ಟ ಅರಣ್ಯಕ್ಕೆ ಬಿಟ್ಟಿದ್ದರು. ಈಗ ಹುಲಿ ಕಾಣಿಸಿಕೊಂಡಿರುವುದ್ದರಿಂದ ಈಭಾಗದ ಜನರು ಮತ್ತಷ್ಟು ಭಯಭೀಯರಾಗಿದ್ದು, ಕೂಡಲೇ ಹುಲಿಯನ್ನು ಹಿಡಿಯಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹುಲಿಯ ಚಲನವಲನವನ್ನು ಯುವಕನೊಬ್ಬ ಮೊಬೈಲ್ ಫೋನ್‌ನಲ್ಲಿ ಚಿತ್ರಿಕರಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.