ADVERTISEMENT

ಬಿಆರ್‌ಟಿ: ಹೆಣ್ಣು ಹುಲಿ ಸಾವು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 18:19 IST
Last Updated 14 ಡಿಸೆಂಬರ್ 2020, 18:19 IST
ಹುಲಿಯ ಕಳೇಬರವನ್ನು ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲಿಸಿದರು
ಹುಲಿಯ ಕಳೇಬರವನ್ನು ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲಿಸಿದರು   

ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವನ್ಯಜೀವಿ ವಲಯದ ಅರೆಪಾಳ್ಯದಲ್ಲಿ ಸೋಮವಾರ ಹೆಣ್ಣು ಹುಲಿಯ ಮೃತದೇಹ ಪತ್ತೆಯಾಗಿದೆ.

ಹುಲಿಗೆ 10ರಿಂದ 12 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಸಹಜವಾಗಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಹೇಳಿದ್ದಾರೆ.

ಹುಲಿ ಮೃತದೇಹ ಪತ್ತೆಯಾಗಿರುವುದನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪಸಂರಕ್ಷಣಾಧಿಕಾರಿ ಜಿ.ಸಂತೋಷ್‌ಕುಮಾರ್‌ ದೃಢಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಎಸಿಎಫ್‌ ರಮೇಶ್‌, ಆರ್‌ಎಫ್‌ಒ ಮಹದೇವಯ್ಯ, ವನ್ಯಜೀವಿ ಮಂಡಳಿ ಸದಸ್ಯ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿ ಮಲ್ಲೇಶಪ್ಪ ಹಾಗೂ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.