
ಗುಂಡ್ಲುಪೇಟೆ: ಪಟ್ಟಣದಲ್ಲಿ ಸಂಚಾರ ಜಾಗೃತಿ ಜಾಥಾ ಅರಿವು ಕಾರ್ಯಕ್ರಮಕ್ಕೆ ಡಿವೈಎಸ್ಪಿ ಸ್ನೇಹ ರಾಜ್ ಚಾಲನೆ ನೀಡಿದರು.
ಪಟ್ಟಣ ಪೊಲೀಸ್ ಠಾಣೆ ಮುಂಭಾಗದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆನೀಡಿ ಅವರು ಮಾತನಾಡಿದರು., ಪ್ರಸ್ತುತ ಸನ್ನಿವೇಶದಲ್ಲಿ ವೈಯಕ್ತಿಕ ವಾಹನ ಬಳಕೆ, ಸಾರ್ವಜನಿಕ ರಸ್ತೆಯಲ್ಲಿನ ಓಡಾಟ ಎಲ್ಲರಿಗೂ ಅನಿವಾರ್ಯವಾಗಿದೆ.ಸಂಚಾರ ನಿಯಮಗಳ ಬಗ್ಗೆ ಎಚ್ಚರಿಕೆ ವಹಿಸಿದರೆ ಅಪಘಾತಗಳ ಪ್ರಮಾಣ ತಗ್ಗುತ್ತವೆ ಎಂದರು. ಸ್ವ ಪ್ರೇರಣೆಯಿಂದ ಸಂಚಾರ ನಿಯಮ ಪಾಲಿಸಿ ಎಂದರು.
ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಯೇ ದ್ವಿಚಕ್ರ ವಾಹನ ಚಾಲನೆ ಮಾಡಬೇಕು. ಪರವಾನಗಿ ಹೊಂದಿರಬೇಕು , ವಾಹನ ವಿಮೆಯನ್ನು ಸಕಾಲದಲ್ಲಿ ಪಾವತಿ ಮಾಡಿ ಎಂದು ಸಲಹೆ ನೀಡಿದರು.
ಪೊಲೀಸ್ ಠಾಣೆಯಿಂದ ಹೊರಟ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಜಾಥಾದ ಉದ್ದಕ್ಕೂ ಸಂಚಾರ ನಿಯಮಗಳನ್ನು ಪಾಲಿಸಿ ಎಂಬ ಘೋಷಣೆಗಳನ್ನು ಕೂಗಲಾಯಿತು. ಪೊಲೀಸ್ ಇನ್‌ಸ್ಪೆಕರ್ ಎಸ್.ಜಯಕುಮಾರ್, ಬೇಗೂರು ಸರ್ಕಲ್ ಇನ್‌ಸ್ಪೆಕ್ಟರ್ ಮೋಹಿತ್ ಸಹದೇವ್, ಗುಂಡ್ಲುಪೇಟೆ ಮತ್ತು ತೆರಕಣಾಂಬಿ, ಬೇಗೂರು ಠಾಣೆ ಪಿಎಸ್‌ಐ ಗಳಾದ ನರೇಶ್‌ಕುಮಾರ್, ಕೆ.ಎಂ.ಮಹೇಶ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.