ಹನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಅಂಗಡಿಯೊಳಗೆ ನುಗ್ಗಿದ ಪರಿಣಾಮ ವ್ಯಕ್ತಿಯೊಬ್ಬರಿಗೆ ಕಾಲು ಮುರಿದಿರುವ ಘಟನೆ ಎಲ್ಲೇಮಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ಗ್ರಾಮದಲ್ಲಿ ಚಾಲಕರ ನಿಯಂತ್ರಣ ತಪ್ಪಿ ದ್ವಿ ಚಕ್ರ ವಾಹನದ ಮೇಲೆ ಕುಳಿತಿದ್ದ ಕೌದಳ್ಳಿ ಮಹೇಶ್ (31)ಎಂಬುವವನಿಗೆ ಗುದ್ದಿದೆ. ಪರಿಣಾಮ ಆತನ ಕಾಲು ಮುರಿದಿದೆ. ಕೂಡಲೆ ಅವರನ್ನು ಚಿಕಿತ್ಸೆಗೆ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಸ್ಸು ಅತಿ ವೇಗವಾಗಿ ಬಂದ ಪರಿಣಾಮ ನಿಯಂತ್ರಣಕ್ಕೆ ಸಿಗದೆ ಈ ಘಟನೆ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.