ಕೊಳ್ಳೇಗಾಲ: ಇಲ್ಲಿನ ಬಸ್ತೀಪುರ ಬಡಾವಣೆಯ ಕಬಿನಿ ನಾಲೆಯ ಒಣ ಗಾಂಜಾ ಸಾಗಾಣೆ ಮಾಡುತ್ತಿದ್ದ ಆರೋಪದ ಮೇಲೆ ತಾಲ್ಲೂಕಿನ ತಿಮ್ಮರಾಜಿಪುರ ಗ್ರಾಮದ ಹುಚ್ಚಯ್ಯ ಎಂಬಾತನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಒಣ ಗಾಂಜಾ ಮಾರಾಟ ಮಾಡುವ ಸಲುವಾಗಿ ಕಬಿನಿ ನಾಲೆಯ ಬಳಿ ಹೋಗುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ವರ್ಷಾ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಯಿಂದ 440 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿದ್ದಾರೆ.
ದಾಳಿಯಲ್ಲಿ ಎಎಸ್ಐ ತಕೀಪುಲ್ಲಾ, ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.