ADVERTISEMENT

ಎರಡು ಪ್ರಕರಣ, ಇಬ್ಬರು ಗುಣಮುಖ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 15:10 IST
Last Updated 24 ನವೆಂಬರ್ 2021, 15:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಎರಡು ಕೋವಿಡ್‌ ಪ್ರಕರಣ ದೃಢವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದ್ದರೆ, ಇನ್ನೊಂದು ಹಳೆಯ ಪ್ರಕರಣ. ಇಬ್ಬರು ಗುಣಮುಖರಾಗಿದ್ದಾರೆ.

ಸೋಂಕಿತರ ಸಂಖ್ಯೆಯಲ್ಲಿ ಬದಲಾವಣೆಯಾಗಿಲ್ಲ. ಸದ್ಯ 20 ಸೋಂಕಿತರಿದ್ದು,ಸೋಂಕಿತರ ಪೈಕಿ 13 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,604 ಪ್ರಕರಣಗಳು ವರದಿಯಾಗಿವೆ. 32,044 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಬುಧವಾರ 1,001 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್‌ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.