ADVERTISEMENT

ಕೋವಿಡ್‌-19| ಚಾಮರಾಜನಗರದಲ್ಲಿ 25 ಪ್ರಕರಣ ದೃಢ, 17 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 14:50 IST
Last Updated 12 ಡಿಸೆಂಬರ್ 2020, 14:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 25 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ.17 ಮಂದಿ ಗುಣಮುಖರಾಗಿದ್ದಾರೆ. ಮೂರು ವಾರಗಳ ಅವಧಿಯಲ್ಲಿ ಇಷ್ಟು ಪ್ರಮಾಣದಲ್ಲಿ ಪ್ರಕರಣಗಳು ವರದಿಯಾಗಿರಲಿಲ್ಲ.

ಪ್ರಕರಣಗಳು ಹೆಚ್ಚಾಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 100ಕ್ಕೆ ಏರಿದೆ. ಈ ಪೈಕಿ 37 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,521ಕ್ಕೆ ಏರಿದೆ. 6,293 ಮಂದಿ ಸೋಂಕು ಮುಕ್ತರಾಗಿದ್ದಾರೆ. 108 ಮಂದಿ ಕೋವಿಡ್‌ನಿಂದ ಹಾಗೂ ಬೇರೆ ಕಾರಣಗಳಿಂದ 20 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಶನಿವಾರ 1,167 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,143 ಮಂದಿಯ ವರದಿ ನೆಗೆಟಿವ್‌ ಬಂದಿವೆ. 24 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ಚಾಮರಾಜನಗರದಲ್ಲೇ ಹೆಚ್ಚು: ದೃಢ ಪಟ್ಟಿರುವ 25 ಪ್ರಕರಣಗಳ ಪೈಕಿ ಚಾಮರಾಜನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು, 16 ಪ್ರಕರಣಗಳು ದೃಢಪಟ್ಟಿವೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ ಆರು, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಮೂರು ಪ್ರಕರಣ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.