ADVERTISEMENT

24 ಮಂದಿಗೆ ಸೋಂಕು, ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 16:15 IST
Last Updated 29 ಜುಲೈ 2021, 16:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 24 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 33 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ 213ಕ್ಕೆ ಇಳಿದಿದೆ. ಐಸಿಯುನಲ್ಲಿ ಇರುವವರ ಸಂಖ್ಯೆಯೂ ಕಡಿಮೆಯಾಗಿದ್ದು, 12 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 28 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 31,811 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 31,070 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣದಿಂದ 569 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಗುರುವಾರ 1,586 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,558 ವರದಿಗಳು ನೆಗೆಟಿವ್‌ ಬಂದಿವೆ. 28 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ನಾಲ್ಕು ಪ್ರಕರಣಗಳು ಬೇರೆ ಬೇರೆ ಜಿಲ್ಲೆಗಳಲ್ಲಿ ದಾಖಲಾಗಿರುವುದರಿಂದ ಆಯಾ ಜಿಲ್ಲೆಗೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾಡಳಿತವು ತನ್ನ ವರದಿಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.