ADVERTISEMENT

ಚಾಮರಾಜನಗರ: 21 ಹೊಸ ಪ್ರಕರಣ, 24 ಮಂದಿ ‌ಗುಣಮುಖ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 3:06 IST
Last Updated 26 ಜುಲೈ 2021, 3:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 21 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 24 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸದ್ಯ 211 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 15 ಮಂದಿ ಐಸಿಯುನಲ್ಲಿ 20 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 31,691ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 30,954ಕ್ಕೆ ಹಿಗ್ಗಿದೆ.

ADVERTISEMENT

ಭಾನುವಾರ 1,620 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,599 ವರದಿಗಳು ನೆಗಟಿವ್‌ ಆಗಿವೆ. 21 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.