ADVERTISEMENT

ಚಾಮರಾಜನಗರ: 27 ಕೋವಿಡ್ ಪ್ರಕರಣ ದೃಢ, 25 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 3:18 IST
Last Updated 31 ಜುಲೈ 2021, 3:18 IST
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 27 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 25 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 215ಕ್ಕೆ ಏರಿದೆ. ಐಸಿಯುನಲ್ಲಿ 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 30 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31828ಕ್ಕೆ ಏರಿದೆ. 31,095 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಶುಕ್ರವಾರ 1,519 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,490 ವರದಿಗಳು ನೆಗೆಟಿವ್‌ ಬಂದಿವೆ. 29 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಇಬ್ಬರು ಹೊರ ಜಿಲ್ಲೆಗೆ ಸೇರಿದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.