ADVERTISEMENT

ಚಾಮರಾಜನಗರ: 23 ಕೋವಿಡ್ ಸಕ್ರಿಯ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 16:10 IST
Last Updated 26 ಜನವರಿ 2021, 16:10 IST
ಚಾಮರಾಜನಗರದ ಕೋವಿಡ್‌–19 ಆಸ್ಪತ್ರೆ
ಚಾಮರಾಜನಗರದ ಕೋವಿಡ್‌–19 ಆಸ್ಪತ್ರೆ   

ಚಾಮರಾಜನರ: ಜಿಲ್ಲೆಯಲ್ಲಿ ಮಂಗಳವಾರ ಮೂರು ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಒಬ್ಬರು ಗುಣಮುಖರಾಗಿದ್ದಾರೆ. 23 ಸಕ್ರಿಯ ಪ್ರಕರಣಗಳಿವೆ. ಸಾವು ಸಂಭವಿಸಿಲ್ಲ. ‌

ಸೋಂಕಿತ 23 ಮಂದಿಯಲ್ಲಿ 20 ಜನರು ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ ಒಬ್ಬರು ಇದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,886ಕ್ಕೆ ಏರಿದೆ. 6,732 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಇತರ ಕಾರಣಗಳಿಂದ ಮೃತಪಟ್ಟಿದ್ದಾರೆ.‌

ADVERTISEMENT

‌ಮಂಗಳವಾರ 978 ಜನರ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 975 ಮಂದಿ ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.