ADVERTISEMENT

ಚಾಮರಾಜನಗರ: 23 ಹೊಸ ಪ್ರಕರಣ, 23 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 16:26 IST
Last Updated 4 ನವೆಂಬರ್ 2020, 16:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 23 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 23 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಇದರೊಂದಿಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,059ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 5,735ಕ್ಕೆ ಹಿಗ್ಗಿದೆ. ಸದ್ಯ 200 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 139 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 27 ಮಂದಿ ಐಸಿಯುನಲ್ಲಿದ್ದಾರೆ. ಈವರೆಗೆ ಕೋವಿಡ್‌ನಿಂದಾಗಿ 105 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ಯೇತರ ಕಾರಣದಿಂದ 19 ಮಂದಿ ಕೊನೆಯುಸಿರೆಳೆದಿದ್ದಾರೆ.

ಬುಧವಾರ 1030 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷೆಗಳ ವರದಿ ಬಂದಿದ್ದು, 1011 ಜನರ ವರದಿ ನೆಗೆಟಿವ್‌ ಆಗಿದೆ. 19 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ನಾಲ್ಕು ಪ್ರಕರಣ ಮೈಸೂರಿನಲ್ಲಿ ವರದಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.