ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 23 ಮಂದಿ ಕೋವಿಡ್ ಇರುವುದು ದೃಢಪಟ್ಟಿದೆ. 17 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.
ಸಕ್ರಿಯ ಪ್ರಕರಣಗಳ ಸಂಖ್ಯೆ 221ಕ್ಕೆ ಏರಿದೆ. ಐಸಿಯುನಲ್ಲಿ 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 32 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.
ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31861ಕ್ಕೆ ಏರಿದೆ. 31,112 ಮಂದಿ ಗುಣಮುಖರಾಗಿದ್ದಾರೆ.
ಶನಿವಾರ 1,427 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,404 ವರದಿಗಳು ನೆಗೆಟಿವ್ ಬಂದಿವೆ. 21 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಹಳೆಯ ಎರಡು ಪ್ರಕರಣಗಳು ಸೇರಿದಂತೆ 23 ಪ್ರಕರಣಗಳನ್ನು ಜಿಲ್ಲಾಡಳಿತವು ವರದಿಯಲ್ಲಿ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.