ADVERTISEMENT

ಬಿಆರ್‌ಟಿಯಲ್ಲಿ ಜಿಂಕೆ ಕಳ್ಳಬೇಟೆ; ಇಬ್ಬರ ಬಂಧನ, ನಾಡ ಬಂದೂಕು ವಶ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 16:41 IST
Last Updated 25 ಸೆಪ್ಟೆಂಬರ್ 2020, 16:41 IST
ಜಿಂಕೆಯನ್ನು ಬೇಟೆಯಾಡಿ ಮಾಂಸ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು
ಜಿಂಕೆಯನ್ನು ಬೇಟೆಯಾಡಿ ಮಾಂಸ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು   

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತರ ಬಳಿಯಿಂದ ಏಳು ಕೆಜಿಯಷ್ಟು ಜಿಂಕೆ ಮಾಂಸ, ಒಂದು ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ. ಚಾಮರಾಜನಗರ ತಾಲ್ಲೂಕಿನ ಮೂಕನಪಾಳ್ಯದ ನಿವಾಸಿಗಳಾದ ನಾಗರಾಜು ನಾಯ್ಕ (30), ಸಂಪತ್‌ ನಾಯ್ಕ (32) ಬಂಧಿತರು.

ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮೂಕನಪಾಳ್ಯ ಗ್ರಾಮದಲ್ಲಿ ಜಿಂಕೆ ಮಾಂಸವನ್ನು ಸಾಗಣೆ ಮಾಡುವಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ADVERTISEMENT

ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ಅಧಿಕಾರಿ ಕಾಂತರಾಜು, ಉಪ ವಲಯ ಅರಣ್ಯ ಅಧಿಕಾರಿ ಕೃಷ್ಣಮೂರ್ತಿ, ಗಾರ್ಡ್‌ಗಳಾದ ಮಹೇಂದ್ರ, ನವೀನ್‌ ಕುಮಾರ್‌, ಅಯಾಜ್‌ ನೆರ್ಲಿ, ಮಹದೇವಪ್ಪ ಸಿ, ಸಿದ್ದರಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.