ಕೊಳ್ಳೇಗಾಲ: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಮಣ್ಣು ಮುಕ್ಕು ಹಾವು ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಹನೂರು ತಾಲ್ಲೂಕಿನ ಆಂಡಿಪಾಳ್ಯ ಗ್ರಾಮದ ರಮೇಶ್ ಹಾಗೂ ಕುರುಬರ ಡಿಕ್ಕಿ ಗ್ರಾಮದ ಮುರುಗೇಶ್ ಬಂಧಿತ ಆರೋಪಿಗಳು.
ಇವರು ಅಕ್ರಮವಾಗಿ ಮಣ್ಣು ಮುಕ್ಕು ಹಾವನ್ನು ಹಿಡಿದು ಕಾಳ ಸಂತೆಯಲ್ಲಿ ಮಾರಾಟ ಮಾಡುವ ಸಲುವಾಗಿ ಸಾಗಾಣಿಕೆ ಮಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಸಂಚಾರಿ ಆರೋಪಿಗಳಿಂದ ಹಾವು ಹಾಗೂ ಕಾರನ್ನು ವಶ ಪಡಿಸಿಕೊಂಡಿದ್ದಾರೆ.
ದೂರು ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.