ADVERTISEMENT

ಚಾಮರಾಜನಗರ: ಎರಡು ಕೋವಿಡ್‌ ಪ್ರಕರಣ, ಐವರು ಗುಣಮುಖ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 7:02 IST
Last Updated 7 ಅಕ್ಟೋಬರ್ 2021, 7:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರಇಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಐವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ 28ಕ್ಕೆ ಇಳಿದಿದೆ. 16 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಐಸಿಯೂನಲ್ಲಿ ಯಾರೂ ಇಲ್ಲ. ಇದುವರೆಗೆ ಜಿಲ್ಲೆಯಲ್ಲಿ 32,514 ಪ್ರಕರಣಗಳು ವರದಿಯಾಗಿವೆ. 31,948 ಮಂದಿ ಗುಣಮುಖರಾಗಿದ್ದಾರೆ.

ಬುಧವಾರ 2,513 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,511 ವರದಿಗಳು ನೆಗೆಟಿವ್‌ ಬಂದಿವೆ. ಕೊಳ್ಳೇಗಾಲ ಮತ್ತು ಯಳಂದೂರು ತಾಲ್ಲೂಕಿನ ತಲಾ ಒಬ್ಬರಿಗೆ ಕೋವಿಡ್‌ ಇರುವುದು ಖಚಿತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.