ADVERTISEMENT

ಇಬ್ಬರಿಗೆ ಕೋವಿಡ್, ಇಬ್ಬರು ಗುಣಮುಖ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 16:48 IST
Last Updated 6 ನವೆಂಬರ್ 2021, 16:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 987 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು ಒಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಜಿಲ್ಲೆಯ ಇನ್ನೊಬ್ಬರಿಗೆ ಸೋಂಕು ತಗುಲಿರುವುದು ಮೈಸೂರಿನಲ್ಲಿ ದೃಢಪಟ್ಟಿದೆ. ಹಾಗಾಗಿ ಜಿಲ್ಲೆಯ ಎರಡು ಪ್ರಕರಣಗಳು ವರದಿಯಾದಂತಾಗಿದೆ.

ಶನಿವಾರ ಇಬ್ಬರು ಸೋಂಕುಮುಕ್ತರಾಗಿದ್ದಾರೆ. ಸಾವು ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳು ಮೂರಕ್ಕೆ ಇಳಿದಿವೆ.ಒಬ್ಬರು ಆಸ್ಪತ್ರೆಯಲ್ಲಿದ್ದು, ಇಬ್ಬರು ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,563ಕ್ಕೆ ಏರಿದೆ. 32,021 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ದೀಪಾವಳಿ ದಿನವಾದ ಶುಕ್ರವಾರ ಜಿಲ್ಲೆಯಲ್ಲಿ ಒಂದೂ ಪ್ರಕರಣ ವರದಿಯಾಗಿರಲಿಲ್ಲ. ಮೂವರು ಗುಣಮುಖರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.