ಕೊಳ್ಳೇಗಾಲ: ತಾಲ್ಲೂಕಿನ ಸತ್ತೇಗಾಲ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಶುಕ್ರವಾರ ಮೃತಪಟ್ಟಿದ್ದಾರೆ.
ಸತ್ತೇಗಾಲ ಗ್ರಾಮದ ನಟರಾಜು (65) ಹಾಗೂ ಮಹೇಶ್ (50) ಮೃತರು. ಇವರು ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸು ಬರುವಾಗ ಕೊಳ್ಳೇಗಾಲದಿಂದ ಬೆಂಗಳೂರು ಕಡೆಗೆ ಅತಿವೇಗದಿಂದ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.