ADVERTISEMENT

ಚಾಮರಾಜನಗರ: ಇಬ್ಬರು ಸಾವು, 105 ಹೊಸ ಪ್ರಕರಣ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 14:38 IST
Last Updated 17 ಸೆಪ್ಟೆಂಬರ್ 2020, 14:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಹಲವು ದಿನಗಳ ನಂತರ ಗುರುವಾರ, ದಾಖಲೆ ಪ್ರಮಾಣದ ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. 105 ಮಂದಿಗೆ ಸೋಂಕು ಇರುವುದು ದೃಢಪಟ್ಟಿವೆ. ಇಬ್ಬರು ಮೃತಪಟ್ಟಿದ್ದಾರೆ. 33 ಮಂದಿ ಗುಣಮುಖರಾಗಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ನೇನೇಕಟ್ಟೆಯ 39 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ–4,64,220) ಸೆ.12ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಮೃತಪಟ್ಟಿದ್ದಾರೆ. ಕೊಳ್ಳೇಗಾಲದ 57 ವರ್ಷದ ಮಹಿಳೆ (ರೋಗಿ ಸಂಖ್ಯೆ–4,58,424) ಸೆ.11ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಕೊನೆಯುಸಿರೆಳೆದಿದ್ದಾರೆ.

ಇದರೊಂದಿಗೆ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 50 ತಲುಪಿದೆ. ಸೋಂಕು ದೃಢಪಟ್ಟಿದ್ದರೂ, ಬೇರೆ ಅನಾರೋಗ್ಯದಿಂದಾಗಿ 20 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟ ಸೋಂಕಿತರ ಒಟ್ಟು ಸಂಖ್ಯೆ 70ಕ್ಕೆ ಏರಿದೆ.

ADVERTISEMENT

ಗುರುವಾರದ 105 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 3,278 ಪ್ರಕರಣಗಳು ವರದಿಯಾಗಿವೆ. 2,574 ಮಂದಿ ಗುಣಮುಖರಾಗಿದ್ದಾರೆ. 635 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 265 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 24 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ 857 ಮಂದಿಗೆ ಕೋವಿಡ್‌ 19 ಪರೀಕ್ಷೆ ನಡೆಸಲಾಗಿದೆ. 762 ಮಂದಿಯ ವರದಿ ನೆಗೆಟಿವ್‌ ಬಂದಿವೆ. 95 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಮೈಸೂರಿನಲ್ಲಿ ಏಳು ಹಾಗೂ ಬೆಂಗಳೂರಿನಲ್ಲಿ ಮೂರು ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.