ADVERTISEMENT

ಚಾಮರಾಜನಗರ: ಮುಂದುವರಿದ ಸಾವಿನ ಸರಣಿ

ಕೋವಿಡ್‌ನಿಂದ ಮತ್ತೆ ಇಬ್ಬರ ಸಾವು, 120 ಮಂದಿ ಗುಣಮುಖ, 60 ಹೊಸ ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 15:00 IST
Last Updated 20 ಅಕ್ಟೋಬರ್ 2020, 15:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಸಾವಿನ ಸರಣಿ ಮುಂದುವರಿದಿದ್ದು, ಮಂಗಳವಾರ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. 120 ಮಂದಿ ಗುಣಮುಖರಾಗಿದ್ದು, 60 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ತಾಲ್ಲೂಕಿನ ನಲ್ಲೂರು ಗ್ರಾಮದ ನಿವಾಸಿ 80 ವರ್ಷದ ವೃದ್ಧ ಅ.11ರಂದು ಕೋವಿಡ್‌ ಆಸ್ಪತ್ರೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.

ನಗರದ 62 ವರ್ಷದ ಮಹಿಳೆ ಅ.10ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮೃತಪಟ್ಟಿದ್ದಾರೆ.

ADVERTISEMENT

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 88ಕ್ಕೆ ಏರಿದೆ. ಕೋವಿಡ್‌ ಯೇತರ ಕಾರಣದಿಂದ 31 ಮಂದಿ ಕೊನೆಯುಸಿರೆಳೆದಿದ್ದಾರೆ.

ಮಂಗಳವಾರದ ಅಂಕಿ ಅಂಶಗಳು ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ 5,551 ಮಂದಿ ಕೋವಿಡ್‌ಗೆ ತುತ್ತಾಗಿದ್ದಾರೆ. 4,792 ಜನರು ಸೋಂಕಿನಿಂದ ಮುಕ್ತರಾಗಿದ್ದಾರೆ. ದೃಢಪಟ್ಟ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 640ಕ್ಕೆ ಕುಸಿದಿದೆ. 207 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 43 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ 1,280 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 1,222 ಮಂದಿಯ ವರದಿ ನೆಗಟಿವ್‌ ಬಂದಿವೆ. 58 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ‌ಎರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.