ADVERTISEMENT

ಚಾಮರಾಜನಗರ: ಸಕ್ರಿಯ ಪ್ರಕರಣಗಳು 200

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 15:00 IST
Last Updated 3 ನವೆಂಬರ್ 2020, 15:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 28 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 25 ಮಂದಿ ಸೋಂಕು ಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ ಜಿಲ್ಲೆಯಲ್ಲಿ 200 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 148 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 52 ಮಂದಿ ಮಾತ್ರ ಕೋವಿಡ್‌ ಆಸ್ಪತ್ರೆಗಳಲ್ಲಿದ್ದಾರೆ. ಇವರಲ್ಲಿ 26 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರದ ಅಂಕಿ ಅಂಶಗಳೂ ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 6,036 ಪ್ರಕರಣಗಳು ವರದಿಯಾಗಿವೆ. 5,712 ಮಂದಿ ಗುಣಮುಖರಾಗಿದ್ದಾರೆ. 105 ಮಂದಿ ಕೋವಿಡ್‌ನಿಂದ ಹಾಗೂ 19 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ADVERTISEMENT

ಮಂಗಳವಾರ 1,226 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 1,198 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.