ADVERTISEMENT

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 4:39 IST
Last Updated 4 ಆಗಸ್ಟ್ 2020, 4:39 IST
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ   

ಹನೂರು: ಬೆಳ್ಳಂಬೆಳಗ್ಗೆ ಬೀಸಿದ ಭಾರಿ ಗಾಳಿಗೆ ರಸ್ತೆ ಬದಿಯಲ್ಲಿದ್ದ ಮರ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ರಾಮಯ್ಯನಕೆರೆ ಬಳಿ ಮಂಗಳವಾರ ಮುಂಜಾನೆ ಜರುಗಿದೆ.

ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದ ಮುನಿಸ್ವಾಮಿ ಮತ್ತು ಕುಮಾರ ಎಂಬುವವರು ಗಾಯಗೊಂಡವರು.
ಮುನಿಸ್ವಾಮಿ ಅವರು ಪಟ್ಟಣದಲ್ಲಿ ಲಾರಿ ಚಾಲಕರಾಗಿದ್ದು, ಮಂಗಳವಾರ ಎಂದಿನಂತೆ ಕೆಲಸಕ್ಕೆ ತೆರಳುತ್ತಿದ್ದರು. ಇವರನ್ನು ಬಿಟ್ಟು ಬರಲು‌ ಕುಮಾರ ಎಂಬುವವರು ಜೊತೆಗೆ ಹೋಗಿದ್ದರು. ಪಟ್ಟಣದ ಹೊರವಲಯದಲ್ಲಿರುವ ರಾಮಯ್ಯನಕೆರೆ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಬದಿಯಲ್ಲಿದ್ದ ಆಲದ ಮರ ಏಕಾಏಕಿ ಇವರು ಹೋಗುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮುರಿದು ಬಿದ್ದಿದೆ.

ಗಾಯಗೊಂಡು ನರಳುತ್ತಿದ್ದ ಇವರನ್ನು ಕಂಡ ಸ್ಥಳೀಯರು ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರಲ್ಲಿ ಮುನಿಸ್ವಾಮಿ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.