ADVERTISEMENT

ಚಾಮರಾಜನಗರ: 62 ಮಂದಿ ಗುಣಮುಖ, 64 ಹೊಸ ಪ್ರಕರಣ

ಇಬ್ಬರು ಸೋಂಕಿತರ ಸಾವು, 4000 ದಾಟಿದ ಸೋಂಕುಮುಕ್ತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 14:58 IST
Last Updated 10 ಅಕ್ಟೋಬರ್ 2020, 14:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ ಕೋವಿಡ್‌ ಸೋಂಕಿತ ಇಬ್ಬರು ಮೃತಪಟ್ಟಿದ್ದಾರೆ. ಒಬ್ಬರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಮತ್ತೊಬ್ಬರು ಬೇರೆ ಕಾರಣದಿಂದ ಕೊನೆಯುಸಿರೆಳೆದಿದ್ದಾರೆ.

ಕೊಳ್ಳೇಗಾಲದ ನಿವಾಸಿ 57 ವರ್ಷದ ಪುರುಷ ಸೆ.28ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದು, ಶುಕ್ರವಾರ ಮೃತಪಟ್ಟಿದ್ದಾರೆ.

ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದ ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದ 80 ವರ್ಷದ ವೃದ್ಧ ಶುಕ್ರವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ನಿಧನರಾಗಿದ್ದಾರೆ. ನಂತರ ನಡೆಸಿದ ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿದೆ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಹಿಗ್ಗಿದೆ.

ADVERTISEMENT

ಶನಿವಾರ 66 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 62 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 4,853 ಪ್ರಕರಣಗಳು ವರದಿಯಾಗಿವೆ. 4,046 ಮಂದಿ ಗುಣಮುಖರಾಗಿದ್ದಾರೆ. 704 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 205 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 41 ಮಂದಿ ಐಸಿಯುನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆ ಹಾಗೂ ಕೇರ್‌ ಕೇಂದ್ರದಲ್ಲಿದ್ದಾರೆ.

ಶುಕ್ರವಾರ ಒಂದೇ ದಿನ 1,033 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 492, ರ‍್ಯಾಪಿಡ್‌ ಆ್ಯಂಟಿಜೆನ್‌ 475 ಪರೀಕ್ಷೆಗಳನ್ನು ನಡೆಸಲಾಗಿದೆ. 967 ಮಂದಿಯ ವರದಿ ನೆಗೆಟಿವ್‌ ಬಂದಿವೆ. 66 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.