ಚಾಮರಾಜನಗರ: ಕೋವಿಡ್–19 ಕಾರಣದಿಂದ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 57ಕ್ಕೆ ಏರಿದೆ. 39 ಮಂದಿ ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದರೆ, 18 ಮಂದಿ ಬೇರೆ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.
ಮೈಸೂರಿನಲ್ಲಿ ದೃಢಪಟ್ಟ ಎರಡು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ 38 ಮಂದಿಗೆ ಸೋಂಕು ಖಚಿತವಾಗಿದೆ. 34 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 2,725ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 2,151ಕ್ಕೆ ತಲುಪಿದೆ. 518 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 172 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 21 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಳಂದೂರು ತಾಲ್ಲೂಕಿನ ಗಂಗಾವಾಡಿ ನಿವಾಸಿ 54 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ–3,71,196) ಸೆ.2ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಅವರು ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿಪುರದ 60 ವರ್ಷದ ಪುರುಷ (ರೋಗಿ ಸಂಖ್ಯೆ–4,17,210) ಸೆ.6ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಮಂಗಳವಾರ ಜಿಲ್ಲೆಯಲ್ಲಿ 826 ಕೋವಿಡ್ ಪರೀಕ್ಷೆಗಳನ್ನು (ಆರ್‌ಟಿಪಿಸಿಆರ್–312, ರ‍್ಯಾಪಿಡ್ ಆ್ಯಂಟಿಜೆನ್–512, ಟ್ರು ನಾಟ್–2) ನಡೆಸಲಾಗಿದೆ. ಈ ಪೈಕಿ 790 ಮಂದಿಯ ವರದಿ ನೆಗೆಟಿವ್ ಬಂದಿದೆ.
ದೃಢಪಟ್ಟ 38 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನ 19, ಗುಂಡ್ಲುಪೇಟೆಯ 14, ಕೊಳ್ಳೇಗಾಲದ ನಾಲ್ಕು ಹಾಗೂ ಯಳಂದೂರಿನ ಒಂದು ಪ್ರಕರಣಗಳು ಸೇರಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.