ADVERTISEMENT

217 ಪ್ರಕರಣ ದೃಢ, ಇಬ್ಬರು ಸಾವು, 77 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 14:59 IST
Last Updated 27 ಏಪ್ರಿಲ್ 2021, 14:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 217 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇಬ್ಬರು ಮೃತಪಟ್ಟಿದ್ದಾರೆ. 77 ಮಂದಿ ಗುಣಮುಖರಾಗಿದ್ದಾರೆ.

ಸೋಂಕಿತರ ಸಂಖ್ಯೆ 1,779ಕ್ಕೆ ಏರಿದೆ. ಈ ಪೈಕಿ 1,308 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 45 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 9,792ಕ್ಕೆ ಏರಿದೆ. 7,874 ಮಂದಿ ಗುಣಮುಖರಾಗಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದ 60 ವರ್ಷದ ಮಹಿಳೆ ಇದೇ 20ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸಿದೆ 25ರಂದು ಮೃತಪಟ್ಟಿದ್ದಾರೆ (ಮಂಗಳವಾರದ ವರದಿಯಲ್ಲಿ ಈ ಪ್ರಕರಣವನ್ನು ಜಿಲ್ಲಾಡಳಿತ ಉಲ್ಲೇಖಿಸಿದೆ). ಚಾಮರಾಜನಗರ ತಾಲ್ಲೂಕಿನ ಜನೂರ್‌ ಹೊಸೂರು ಗ್ರಾಮದ 60 ವರ್ಷದ ವ್ಯಕ್ತಿ 20ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಅವರು ಕೊನೆಯುಸಿರೆಳೆದಿದ್ದಾರೆ.

ADVERTISEMENT

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 128ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 20 ಮಂದಿ ಕೊನೆಯುಸಿರೆಳೆದಿದ್ದಾರೆ.

ಸೋಮವಾರ 806 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 569 ವರದಿಗಳು ನೆಗೆಟಿವ್‌ ಬಂದಿವೆ. 237 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ 17 ಪ್ರಕರಣಗಳು ಬೇರೆ ಜಿಲ್ಲೆಗೆ ಸೇರಿವೆ. ಮೂವರು ಸೋಂಕಿತರ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಜಿಲ್ಲಾಡಳಿತದ ವರದಿ ಹೇಳಿದೆ.

ಚಾಮರಾಜನಗರದಲ್ಲಿ ಇಳಿದ ಪ್ರಕರಣ: ನಾಲ್ಕೈದು ದಿನಗಳಿಗೆ ಹೋಲಿಸಿದರೆ ಮಂಗಳವಾರ ಚಾಮರಾಜನಗರ ತಾಲ್ಲೂಕಿನಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 81 ಪ್ರರಕಣಗಳು ವರದಿಯಾಗಿವೆ. ಉಳೀದಂತೆ ಕೊಳ್ಳೇಗಾಲದಲ್ಲಿ 54, ಗುಂಡ್ಲುಪೇಟೆಯಲ್ಲಿ 33, ಹನೂರಿನಲ್ಲಿ 28, ಯಳಂದೂರು ತಾಲ್ಲೂಕಿನಲ್ಲಿ 18 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಹೊರ ಜಿಲ್ಲೆಯ ಮೂವರಿಗೆ ಕೋವಿಡ್‌ ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.