ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಕಾಡಂಚಿನ ಆಲತ್ತೂರು ಗ್ರಾಮದ ಕೃಷಿಕ ದಂಪತಿ ಮಾದೇಗೌಡ–ಜಯಮ್ಮ ಅವರ ಪುತ್ರಿ ಎ.ಎಂ.ಚೈತ್ರಾ ಅವರು ಯುಪಿಎಸ್‌ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ 31ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.
ದೂರಸಂಪರ್ಕ ಸಚಿವಾಲಯದಲ್ಲಿ ಕಿರಿಯ ಟೆಲಿಕಾಂ ಅಧಿಕಾರಿ ಹುದ್ದೆಗೆ ಆಯ್ಕೆಯಾಗಿರುವ ಚೈತ್ರಾ ಸೆ.8ರಿಂದ ಗಾಜಿಯಾಬಾದ್‌ನಲ್ಲಿರುವ ನ್ಯಾಷನಲ್ ಕಮ್ಯುನಿಕೇಷನ್ ಅಕಾಡೆಮಿಯಲ್ಲಿ ಕೆಲಸ ಆರಂಭಿಸಲಿದ್ದಾರೆ.
ಆಲತ್ತೂರಿನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಾಲೇಜು ಶಿಕ್ಷಣ, ಮೈಸೂರಿನ ಎಟಿಎಂಇ ಕಾಲೇಜಿನಲ್ಲಿ ಎಂಜಿನಿಯರ್ ಪದವಿ ಪಡೆದಿದ್ದಾರೆ. ಇಎಸ್ಇ ಗೇಟ್ ಪರೀಕ್ಷೆಗಾಗಿ ಹೈದರಾಬಾದ್ ಮತ್ತು ನವದೆಹಲಿಯಲ್ಲಿ ತರಬೇತಿ ಪಡೆದಿದ್ದರು.
‘ಕನ್ನಡ ಮಾದ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದೇನೆ. ಬೋಧಕರ ಮಾರ್ಗದರ್ಶನದಲ್ಲಿ ಯುಪಿಎಸ್‌ಪಿ ಪರೀಕ್ಷೆಯಲ್ಲಿ ಯಶಸ್ಸು ಪಡೆದಿದ್ದೇನೆ. ಪೋಷಕರು ಬೆಂಬಲವಾಗಿ ನಿಂತರು. ಅವರ ಪರಿಶ್ರಮ ವ್ಯರ್ಥವಾಗಲಿಲ್ಲ’ ಎಂದು ಚೈತ್ರಾ ಈ ಕುರಿತು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.