
ಕೊಳ್ಳೇಗಾಲ: ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮೇಲ್ಸೇತುವೆ ಸಂಪೂರ್ಣ ಅವೈಜ್ಞಾಕವಾಗಿದೆ ಎಂದು ಸಂಸದ ಸುನೀಲ್ ಬೋಸ್ ಹೇಳಿದರು.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ವಾಹನಗಳು ಹೋಗುವುದಕ್ಕೆ ಯೋಗ್ಯವಾಗಿಲ್ಲ. ವೇಗವಾಗಿ ವಾಹನ ಚಾಲನೆ ಮಾಡಿಕೊಂಡು ಹೋದರೆ ಕಾರು ಅಲುಗಾಡುತ್ತದೆ ಹಾಗಾಗಿ ಆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಆ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ, ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಖ್ಯವಾಗಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂಬ ಸೂಚನೆಯನ್ನು ನೀಡಿದ್ದೇನೆ ಎಂದರು.
ಗುತ್ತಿಗೆದಾರರಿಗೆ ಯಾವುದೇ ಅನುದಾನ ಹೋಗದಂತೆ ತಡೆಹಿಡಿಯಬೇಕು ಎಂಬುದಾಗಿಯೂ ಸಹ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಕಳಪೆ ಕಾಮಗಾರಿ ಕಿತ್ತುಹಾಕಿ ಹೊಸದಾಗಿ ಮಾಡಬೇಕು. ಮುಂದಿನ ವಾರ ಕಾಮಗಾರಿಯನ್ನು ವೀಕ್ಷಣೆ ಮಾಡುತ್ತೇನೆ, ಒಂದು ವೇಳೆ ಲೋಪವಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಎಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮುಖಂಡ ರಮೇಶ್, ಸುಮನ್, ಬಸವಣ್ಣ, ರೇವಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.