
ಚಾಮರಾಜನಗರ: ‘ರಾಜ್ಯ ಸರ್ಕಾರದ ಖಜಾನೆ ಬರಿದಾಗಿದೆ. ಸಿದ್ದರಾಮಯ್ಯ ಡಮ್ಮಿ ಮುಖ್ಯಮಂತ್ರಿಯಾಗಿದ್ದಾರೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೋಮವಾರ ಇಲ್ಲಿ ಟೀಕಿಸಿದರು.
ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸರ್ಕಾರದ ಹುಳುಕು ಮುಚ್ಚಲು ಏನು ಬೇಕಾದರೂ ಮಾಡುವ ಸಿದ್ದರಾಮಯ್ಯ, ಎರಡನೇ ಬಾರಿ ಮುಖ್ಯಮಂತ್ರಿಯಾದ ಮೇಲೆ ನಿಷ್ಕ್ರಿಯರಾಗಿದ್ದಾರೆ’ ಎಂದರು.
‘ಬಳ್ಳಾರಿಯಲ್ಲಿ ಕಾಂಗ್ರೆಸ್‌ನವರು ಮಾಡಿರುವ ಪಾಪದ ಕೆಲಸ ಎಲ್ಲರಿಗೂ ತಿಳಿದಿದ್ದು, ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು. ಮುಗ್ಧ ಜನರನ್ನು ಬಲಿ ಕೊಡಬಾರದು, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಕಾನೂನು ಕ್ರಮ ಜರುಗಿಸದಿದ್ದರೆ ಮುಖ್ಯಮಂತ್ರಿ ರಾಜ್ಯದ ಖಳನಾಯಕರಾಗುತ್ತಾರೆ’ ಎಂದು ಹೇಳಿದರು.
‘ಸಚಿವ ಮುನಿಯಪ್ಪ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲೆಂದೇ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ್ದಾರಷ್ಟೆ. ಅವರು ಗಡುಸಾಗಿ ಮಾತನಾಡುವುದನ್ನು ಕಲಿಯಬೇಕು’ ಎಂದರು.
‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಯಾಗುತ್ತದೆಯೇ’ ಎಂಬ ಪ್ರಶ್ನೆಗೆ ಸಚಿವರು ಉತ್ತರಿಸಲಿಲ್ಲ.