ADVERTISEMENT

ಗುಂಡ್ಲುಪೇಟೆ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ!

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2022, 4:06 IST
Last Updated 23 ಅಕ್ಟೋಬರ್ 2022, 4:06 IST
ಚಾಮರಾಜನಗರ ಜಿಲ್ಲಾ ಸಚಿವ ವಿ.ಸೋಮಣ್ಣ ಅವರು ಮಹಿಳೆಯೊಬ್ಬರ ಕೆನ್ನೆಗೆ ಹೊಡೆಯುತ್ತಿರುವ ದೃಶ್ಯ
ಚಾಮರಾಜನಗರ ಜಿಲ್ಲಾ ಸಚಿವ ವಿ.ಸೋಮಣ್ಣ ಅವರು ಮಹಿಳೆಯೊಬ್ಬರ ಕೆನ್ನೆಗೆ ಹೊಡೆಯುತ್ತಿರುವ ದೃಶ್ಯ    

ಗುಂಡ್ಲುಪೇಟೆ (ಚಾಮರಾಜನಗರ): ತಾಲ್ಲೂಕಿನ ಹಂಗಳದಲ್ಲಿ ಶನಿವಾರ ಸಂಜೆ ನಡೆದ ಗ್ರಾಮೀಣ ಪ್ರದೇಶಗಳ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಮೂಲಸೌಕರ್ಯ ಮತ್ತು‌ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಹೊಡೆದಿದ್ದಾರೆ.

ಈ ವಿಡಿಯೊ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹಂಗಳ ಗ್ರಾಮ ಪಂಚಾಯತಿಯಿಂದ 173 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರಗಳನ್ನು ಹಂಚಿಕೆ ಮಾಡಲಾಗಿತ್ತು.

ADVERTISEMENT

'ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ' ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ‌ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.