ADVERTISEMENT

ಗಿರಿಜನರಲ್ಲಿ ಸಾಕ್ಷರತೆ ಹೆಚ್ಚಾಗಲಿ

ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಕಟ್ಟಡ ಉದ್ಘಾಟನೆ: ಶಾಸಕ ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 18 ಜನವರಿ 2026, 5:50 IST
Last Updated 18 ಜನವರಿ 2026, 5:50 IST
ಹನೂರು ತಾಲ್ಲೂಕಿನ ಗಾಣಿಗ ಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡವನ್ನು ಶಾಸಕ ಎಂ.ಆರ್. ಮಂಜುನಾಥ್ ಶನಿವಾರ ಉದ್ಘಾಟಿಸಿದರು
ಹನೂರು ತಾಲ್ಲೂಕಿನ ಗಾಣಿಗ ಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡವನ್ನು ಶಾಸಕ ಎಂ.ಆರ್. ಮಂಜುನಾಥ್ ಶನಿವಾರ ಉದ್ಘಾಟಿಸಿದರು   

ಹನೂರು : ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಣಿಗಮಂಗಲ ಗ್ರಾಮದಲ್ಲಿ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡವನ್ನು ಶಾಸಕ ಎಂ.ಆರ್. ಮಂಜುನಾಥ್ ಶನಿವಾರ ಉದ್ಘಾಟಿಸಿದರು

ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಿನ ಒಳಗೆ ಹಾಗೂ ಕಾಡಿನ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಗಿರಿಜನರು ವಾಸ ಮಾಡುತ್ತಿದ್ದಾರೆ. ಅವರ ಬದುಕಿನ ವಸ್ತು ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಇಂದಿಗೂ ಕನಿಷ್ಠ ಮೂಲ ಸೌಕರ್ಯದಿಂದಲೂ ವಂಚಿತಗೊಂಡಿದ್ದಾರೆ. ಅವರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಗಿರಿಜನರಲ್ಲಿ ಸಾಕ್ಷರತಾ ಪ್ರಮಾಣ ಕಮ್ಮಿಯಾಗಿದೆ. ಅವರಿಗೆ ಶಿಕ್ಷಣ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಹೀಗಿದ್ದರೂ ಶಾಲೆಗಳಿಗೆ ಮಕ್ಕಳು ಸಮರ್ಪಕವಾಗಿ ದಾಖಲಾಗುತ್ತಿಲ್ಲ ಎಂದರು.

ADVERTISEMENT

ವಿದ್ಯೆಯಿಂದ ಯಾವ ಮಗುವು ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಸಮುದಾಯದ ಹಿರಿಯರು ವಿದ್ಯಾವಂತರು ನಿಮ್ಮ ಸಮುದಾಯದ ಮಕ್ಕಳಿಗೆ ಹೆಚ್ಚು ಶಿಕ್ಷಣ ಕೊಡಿಸಿ ಜಾಗೃತರನ್ನಾಗಿ ಮಾಡಬೇಕು. ಅಧಿಕಾರಿಗಳು ಸಹ ಉನ್ನತ ಶಿಕ್ಷಣ ಪಡೆದ ಮಕ್ಕಳನ್ನು ಗುರುತಿಸಿ ಅವರಿಗೆ ಉದ್ಯೋಗ ಕಲ್ಪಿಸಿಕೊಡುವುದರ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು ಎಂದರು.

ಸರ್ಕಾರದ ಅಂಗ ಸಂಸ್ಥೆ ಬಿಎಸ್‌ಎನ್‌ಎಲ್‌ ಗಾಣಿಗ ಮಂಗಲ ಗ್ರಾಮಕ್ಕೆ ಸ್ಯಾಟಲೈಟ್ ಮೂಲಕ ಟವರ್ ನೀಡಿರುವುದು ಸಂತೋಷ ಅವರಿಗೆ ಅಭಿನಂದನೆ ತಿಳಿಸೋಣ ಎಂದರು. ಕಾರ್ಯಕ್ರಮದಲ್ಲಿ ಸ್ಥಳೀಯರು ಹಲವಾರು ಸಮಸ್ಯೆಗಳನ್ನು ತಿಳಿಸಿದ್ದು, ಬಗೆಹರಿಸಲು ಸೂಚನೆ ನೀಡಲಾಗುವುದು ಎಂದರು.

ಗ್ರಾಮದ ಎಂ.ಕಾಂ ವಿದ್ಯಾರ್ಥಿನಿ ಚಂದನ ಮಾತನಾಡಿ, ನಮ್ಮ ಗ್ರಾಮದಲ್ಲಿ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅವರಿಗೆ ಶಿಕ್ಷಣ ಕೊಡಿಸಲು ಪೋಷಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಪೋಷಕರು ಶಕ್ತರಿರುವುದಿಲ್ಲ ಹಾಗಾಗಿ ಅಂತಹ ವಿದ್ಯಾರ್ಥಿಗಳಿಗೆ ಸಹಕಾರ ನೀಡುವ ಕೆಲಸ ಮಾಡಿ ಎಂದರು.

ನಾನು ಎಂ.ಕಾಂ ಮಾಡಿ ಕೆಲಸ ಮಾಡುತ್ತಿದ್ದೇನೆ. ನನ್ನ ಜೊತೆ ನಮ್ಮ ಸಮುದಾಯ ಕೂಡ ಮುಂದೆ ಬರಬೇಕು ಎಂಬುದು ನನ್ನ ಆಶಯವಾಗಿದೆ. ಜೊತೆಗೆ ನಮ್ಮ ಊರಿಗೆ ಬರುವ ರಸ್ತೆ ಹಾಳಾಗಿದ್ದು ಅಭಿವೃದ್ಧಿಪಡಿಸಿ. ಆಂಬುಲೆನ್ಸ್ ಬರ್ತಾ ಇಲ್ಲ. ಬಂಡಳ್ಳಿ ಗ್ರಾಮದಲ್ಲಿ ವೈದ್ಯರೇ ಇಲ್ಲ, ನರ್ಸ್ ಮಾತ್ರ ಇರುತ್ತಾರೆ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರು. 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಗಮ್ಮ, ಉಪಾಧ್ಯಕ್ಷೆ ಮಹಾದೇವಮ್ಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂಧ್ಯಾ, ಕಾರ್ಯಪಾಲಕ ಎಂಜಿನಿಯರ್ ಪಂಪಾಪತಿ, ಸಹಾಯಕ ಎಂಜಿನಿಯರ್ ತನುಜ್ ಕುಮಾರ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಪ್ರಕಾಶ್, ಜಿಲ್ಲಾ ಸೋಲಿಗರ ಸಂಘದ ಅಧ್ಯಕ್ಷ ಮಾದೇಗೌಡ, ಸ್ಥಳದ ದಾನಿಗಳು ಶಿವಮುತ್ತಪ್ಪ, ಮುತ್ತಯ್ಯ, ಸೋಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ದೊಡ್ಡಸಿದ್ದಯ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.