ADVERTISEMENT

ಡ್ರಗ್ಸ್‌ ಮಾಫಿಯಾದಲ್ಲಿ ‘ದೊಡ್ಡ’ವರಿದ್ದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ-ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 14:02 IST
Last Updated 9 ಸೆಪ್ಟೆಂಬರ್ 2020, 14:02 IST
ವಿಜಯೇಂದ್ರ
ವಿಜಯೇಂದ್ರ   

ಚಾಮರಾಜನಗರ: ‘ರಾಜ್ಯದಲ್ಲಿರುವ ಡ್ರಗ್ಸ್‌ ಮಾಫಿಯಾವನ್ನು ಬುಡ ಸಮೇತ ಕಿತ್ತು ಹಾಕುವ ದಿಟ್ಟ ನಿರ್ಧಾರವನ್ನು ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಇದರಲ್ಲಿ ಎಷ್ಟೇ ದೊಡ್ಡವರು ಇದ್ದರೂ, ಕ್ಷಮಿಸುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ರಾ‌ಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಹತ್ತಾರು ವರ್ಷಗಳಿಂದ ಈ ಪಿಡುಗು ಇದ್ದರೂ ಯಾವುದೇ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೊರಟಿದೆ. ರಾಜ್ಯದಾದ್ಯಂತ ದಾಳಿಗಳು ನಡೆಯುತ್ತಿವೆ. ಭಾರಿ ಪ್ರಮಾಣದಲ್ಲಿ ಗಾಂಜಾ ಜಪ್ತಿ ಮಾಡಲಾಗುತ್ತಿದೆ. ಸರ್ಕಾರ ನಿರ್ದಾಕ್ಷಿಣ ಕ್ರಮ ಕೈಗೊಳ್ಳುತ್ತಿರುವುದನ್ನು ಬಿಜೆಪಿ ಸ್ವಾಗತಿಸುತ್ತದೆ’ ಎಂದು ಅವರು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ‘ಅದರ ಬಗ್ಗೆ ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಅಧಿವೇಶನದ ಬಳಿಕ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.