ಕೊಳ್ಳೇಗಾಲ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಾಡಕಚೇರಿಯ ಗ್ರಾಮ ಲೆಕ್ಕಿಗ ನಿರಂಜನ್ ಎಂಬವರ ಮೃತ ದೇಹ ಭಾನುವಾರ ತಾಲ್ಲೂಕಿನ ಯಡಕುರಿಯ ಗ್ರಾಮದ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.
ಇವರು ತಾಲ್ಲೂಕಿನ ದಾಸನಪುರ ಗ್ರಾಮದ ಬಳಿಯ ಸೇತುವೆ ಮೇಲಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಮೂರುದಿನ ಹುಡುಕಾಡಿದರೂ ಮೃತ ದೇಹ ಪತ್ತೆಯಾಗಿರಲಿಲ್ಲ. ಆದರೆ ಭಾನುವಾರ ಬೆಳಗ್ಗೆ ಕಾಣಿಸಿಕೊಂಡಿದೆ.
‘ನಿರಂಜನ್ ಅವರ ಪತ್ನಿ ತೇಜಸ್ವಿನಿ 5 ತಿಂಗಳ ಗರ್ಭಿಣಿಯಾಗಿದ್ದು, ಶಿಶುವಿನ ಬೆಳವಣಿಗೆ ಸರಿಯಾಗಿಲ್ಲದ ಕಾರಣ ಮನನೊಂದಿದ್ದರು’ ಎಂದು ತೇಜಸ್ವಿನಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.