ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಾಡಕಚೇರಿಯ ಗ್ರಾಮ ಲೆಕ್ಕಿಗ ನಿರಂಜನ್ ಎಂಬುವರು ತಾಲ್ಲೂಕಿನ ದಾಸನಪುರ ಗ್ರಾಮದಲ್ಲಿ ಕಾವೇರಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು.
ಕೊಳ್ಳೇಗಾಲ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಾಡಕಚೇರಿಯಲ್ಲಿ ಗ್ರಾಮ ಲೆಕ್ಕಿಗರಾಗಿದ್ದ ನಿರಂಜನ್ ಎಂಬುವರು ತಾಲ್ಲೂಕಿನ ದಾಸನಪುರ ಗ್ರಾಮದಲ್ಲಿ ಕಾವೇರಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಮಾನಸಿಕವಾಗಿ ನೊಂದಿದ್ದ ನಿರಂಜನ್ ಮಳವಳ್ಳಿಯಿಂದ ಬೈಕ್‌ನಲ್ಲಿ ಕೊಳ್ಳೇಗಾಲಕ್ಕೆ ಬಂದು ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಪೊಲೀಸರು ಅಗ್ನಿಶಾಮಕದಳದೊಂದಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಮಾನಸಿಕವಾಗಿ ನೊಂದಿದ್ದ ನಿರಂಜನ್ ಪತ್ನಿ ಹಾಗೂ ಸಹೋದರನಿಗೆ ಕರೆಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ವಿಚಾರ ತಿಳಿಸಿ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.