ಕೊಳ್ಳೇಗಾಲ: ನಾಲ್ಕು ಕೆ.ಜಿ.ಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಮೈಸೂರಿನ ಅಶೋಕಪುರಂ ನಿವಾಸಿ ವಸಂತ ಕುಮಾರ್, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಆರೂರಿನ ವೈರಮುಡಿ ಬಂಧಿತ ಆರೋಪಿಗಳು. ಬಂಧಿತರಿಂದ 4.386 ಕೆ.ಜಿ ತೂಕದ ತಿಮಿಂಗಿಲ ವಾಂತಿ, ಶಿಫ್ಟ್ ಕಾರು ಹಾಗೂ ಎರಡು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ತಮಿಳುನಾಡಿನ ಸೇಲಂನ ಕಾಳಸಂತೆಯಲ್ಲಿ ಮಾರಾಟ ಮಾಡಲು, ತಾಲ್ಲೂಕಿನ ಸತ್ತೇಗಾಲದಿಂದ ಕೊಳ್ಳೇಗಾಲ ನಗರಕ್ಕೆ ಕಾರಿನಲ್ಲಿ ತಿಮಿಂಗಿಲ ವಾಂತಿ ಸಾಗಣೆ ಮಾಡುತ್ತಿದ್ದರು ಎಂಬ ಮಾಹಿತಿ ಮೇರೆಗೆ ಪಿಎಸ್ಐ ವರ್ಷ, ಡಿವೈಎಸ್‌ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದೆ.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.