ಹನೂರು (ಚಾಮರಾಜನಗರ ಜಿಲ್ಲೆ): ‘ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಮ್ಮ ಸರ್ಕಾರ ಅವಧಿ ಪೂರೈಸಲಿದೆ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ತಾಲ್ಲೂಕಿನ ಚಿಂಚಳ್ಳಿಯಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿ, ‘ಯಾರೇ ಮುಖ್ಯಮಂತ್ರಿಯಾದರೂ ಅವರು ಕಾಂಗ್ರೆಸ್‌ನವರೇ ಆಗಿರುತ್ತಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅನ್ಯೋನ್ಯವಾಗಿದ್ದಾರೆ. ಸಿದ್ದರಾಮಯ್ಯ ಮುಂದುವರಿದರೆ ಡಿಕೆಶಿ ಬೇಜಾರಾಗುವುದಿಲ್ಲ. ಹಾಗೆಯೇ ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಿದ್ದರಾಮಯ್ಯ ಅವರೂ ಬೇಜಾರಾಗುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.