ADVERTISEMENT

ಮಹದೇಶ್ವರ ಬೆಟ್ಟ: ಕಾಲ್ನಡಿಗೆ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ;ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2024, 6:19 IST
Last Updated 10 ಏಪ್ರಿಲ್ 2024, 6:19 IST
<div class="paragraphs"><p>ಸಾವು (ಸಾಂಕೇತಿಕ ಚಿತ್ರ)</p></div>

ಸಾವು (ಸಾಂಕೇತಿಕ ಚಿತ್ರ)

   

ಮಹದೇಶ್ವರ ಬೆಟ್ಟ (ಚಾಮರಾಜನಗರ): ಹನೂರು ತಾಲ್ಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ಸಂಜೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲಿನ ಹೊನ್ನೇನಳ್ಳಿಯ ಲಕ್ಷ್ಮಿ (40) ಮೃತಪಟ್ಟವರು.

ADVERTISEMENT

ಗ್ರಾಮದಿಂದ ಎಂಟು ಮಂದಿ ಬೆಟ್ಟಕ್ಕೆ ಬಂದಿದ್ದರು. ಈ ಪೈಕಿ ಲಕ್ಷ್ಮಿ, ಪದ್ಮಮ್ಮ, ಪುಟ್ಟರಾಜು ಅವರು ಕಾಲ್ನಡಿಗೆಯಲ್ಲಿ ಬರುತ್ತಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಆನೆ ತಲೆದಿಂಬ ಸಮೀಪ ಕಾಡಾನೆ ಹಠಾತ್ ದಾಳಿ ಮಾಡಿದೆ. ಆನೆ ತುಳಿತಕ್ಕೆ ಒಳಗಾದ ಲಕ್ಷ್ಮಿ ಅವರು ಸ್ಥಳದಲ್ಲೇ ಮೃತಪಟ್ಟರು.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.