ADVERTISEMENT

ಸಚಿವ ಸ್ಥಾನ ಸಿಕ್ಕರೆ, ಬಿಜೆಪಿ ಸೇರ್ಪಡೆ ಖಚಿತ: ಕೊಳ್ಳೇಗಾಲ ಶಾಸಕ ಎನ್‌.ಮಹೇಶ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 12:50 IST
Last Updated 5 ಜನವರಿ 2021, 12:50 IST
ಎನ್‌.ಮಹೇಶ್‌
ಎನ್‌.ಮಹೇಶ್‌   

ಚಾಮರಾಜನಗರ: ’ಸಚಿವ ಸ್ಥಾನ ನೀಡಿದರೆ, ಬಿಜೆಪಿಗೆ ಸೇರುವುದು ಖಂಡಿತ’ ಎಂದು, ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿರುವ, ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಹೇಳಿದರು.

ಬಿಳಿಗಿರಿರಂಗನಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸೇರ್ಪಡೆ ಬಗ್ಗೆ ನಾನು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ಕಳೆಯಲಿ. ನಂತರ ನೋಡೋಣ.ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಅಂತಹ ಸಂದರ್ಭ ಸೃಷ್ಟಿಯಾಗಬೇಕು. ನಾನಾಗಿಯೇ ತೀರ್ಮಾನ ಕೈಗೊಳ್ಳುವುದಕ್ಕೆ ಆಗುವುದಿಲ್ಲ’ ಎಂದರು.

’ಒಂದು ಸ್ಥಾನಮಾನ ಸಿಕ್ಕಿದರೆ, ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಅಪೇಕ್ಷೆಯನ್ನು ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ’ ಎಂದರು.

ADVERTISEMENT

ಈ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.