ಕೊಳ್ಳೇಗಾಲ: ಇಲ್ಲಿನ ಹೊಸ ಕುರುಬರ ಬೀದಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಮನೆಯಲ್ಲಿ ದಾಸ್ತಾನು ಮಾಡಿಟ್ಟಿದ್ದ ಮಹಿಳೆಯನ್ನು ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ನಗರದ ಹೊಸಕುರುಬರ ಬೀದಿಯ ನಿವಾಸಿ ವಹೀದಾ (39) ಬಂಧಿತ ಆರೋಪಿ. ಈಕೆಯಿಂದ 5 ಚೀಲದಲ್ಲಿ 196 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಈಕೆಯು ಅಕ್ಕಪಕ್ಕದ ಮನೆಗಳಲ್ಲಿ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ದಾಸ್ತಾನು ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ವರ್ಷಾ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಶಂಕರರಾಜು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.