ADVERTISEMENT

ಆನೆ ದಾಳಿಗೆ ಮಹಿಳೆ ಸಾವು; ಪರಿಹಾರದ ಭರವಸೆ ನೀಡಿದ ಅರಣ್ಯ ಇಲಾಖೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 15:36 IST
Last Updated 13 ಏಪ್ರಿಲ್ 2022, 15:36 IST

ಹನೂರು: ಜಾನುವಾರುಗಳನ್ನು ಮೇಯಿಸಲು ಹೋಗಿದ್ದ, ತಾಲ್ಲೂಕಿನ ಬಿದರಳ್ಳಿ ಗ್ರಾಮದ ಜಡೇಮಾದಮ್ಮ (55) ಅವರು ಬುಧವಾರ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟಿದ್ದಾರೆ.

ಮಧ್ಯಾಹ್ನದ ಹೊತ್ತಿಗೆ ಹಸುಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಎಲಚಿಕೆರೆ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಏಕಾಏಕಿ ಒಂಟಿ ಕಾಡಾನೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಜಡೇಮಾದಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ‌ ಮಹಜರು ನಡೆಸಿದ್ದಾರೆ.

ಮಹಿಳೆ ಆನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ವಿಷಯ ತಿಳಿದಿದೆ. ಮೂರು ದಿನಗಳೊಳಗೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ₹7.5 ಲಕ್ಷ ಪರಿಹಾರ ವಿತರಿಸಲಾಗುವುದು. ‘ಗುರುವಾರ ಸ್ಥಳಕ್ಕೆ ತೆರಳಿ ಘಟನೆ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮಲೆಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕುಂಡಲು 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.