ADVERTISEMENT

ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 5:20 IST
Last Updated 18 ಡಿಸೆಂಬರ್ 2025, 5:20 IST
ಗುಂಡ್ಲುಪೇಟೆ ಪಟ್ಟಣದಲ್ಲಿ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆ ವತಿಯಿಂದ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು 
ಗುಂಡ್ಲುಪೇಟೆ ಪಟ್ಟಣದಲ್ಲಿ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆ ವತಿಯಿಂದ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು    

ಗುಂಡ್ಲುಪೇಟೆ: ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆ ವತಿಯಿಂದ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಪಟ್ಟಣದ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಎಎಸ್‌ಐ ರೇವಣ್ಣಸ್ವಾಮಿ, ಸಂಸ್ಥೆಯು ಕೌಶಲ ತರಬೇತಿ ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುತ್ತಿದೆ. ಗ್ರಾಮೀಣ ಜನರ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಹಲವು ಯೋಜನೆಗಳ ಅನುಕೂಲ ಆಸಕ್ತರು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಸಂಸ್ಥೆಯ ಯೋಜನಾ ಮುಖ್ಯಸ್ಥ ಮಧು ಎನ್. ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆ ಕೆಲಸ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ADVERTISEMENT

ಹೆಲ್ಪ್ ಏಜ್ ಸಂಸ್ಥೆಯ ರಾಜಣ್ಣ, ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆಯ ಕೇಶವಮೂರ್ತಿ, ಪುನೀತ್, ತರಬೇತುದಾರರಾದ ರತ್ನಮ್ಮ, ಪಲ್ಲವಿ ಸೇರಿ ಹೊಲಿಗೆ ತರಬೇತಿ ಪಡೆದ ಮಹಿಳೆಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.