ಗುಂಡ್ಲುಪೇಟೆ: ತಾಲ್ಲೂಕಿನ ಗುರುವಿನಪುರ ಗ್ರಾಮದಲ್ಲಿ ಕಬ್ಬು ಬೆಳೆಗಾರರ ಸಂಘಟನೆ ವತಿಯಿಂದ ವಿಶ್ವ ರೈತ ದಿನ ಆಚರಿಸಲಾಯಿತು.
ಈ ವೇಳೆ ಕಬ್ಬು ಬೆಳೆಗಾರರ ಸಂಘಟನೆ ಗುರುವಿನಪುರ ಗ್ರಾಮ ಘಟಕ ಅಧ್ಯಕ್ಷ ಮೋಹನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಮ್ಮನ್ನಾಳುವ ಸರ್ಕಾರಗಳು ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಹುನ್ನಾರ ನಡೆಸುತ್ತಿವೆ. ಇದರಿಂದ ರೈತರು ಕೃಷಿ ಬಿಟ್ಟು ಬೇರೆ ಕೆಲಸದಲ್ಲಿ ತೊಡಗುವ ಪರಿಸ್ಥಿತಿ ಬಂದೊದಗಿದೆ ಎಂದು ಅಸಮಾಧಾನ ಹೊರ ಹಾಕಿದರು.
ಕೇಂದ್ರ ಸರ್ಕಾರವು ರೈತರು ಉತ್ಪಾದನೆ ಮಾಡುವ ವಸ್ತುಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದರೆ ರೈತ ಅಭಿವೃದ್ಧಿ ಹೊಂದುತ್ತಾನೆ. ಇಲ್ಲವಾದಲ್ಲಿ ಬೆಲೆ ಸಿಗದೆ ಸಾಲದ ಸುಳಿಗೆ ಸಿಲುಕುವ ಪರಿಸ್ಥಿತಿ ಬಂದೊದಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಚಿಂತನೆ ನಡೆಸಬೇಕು ಎಂದು ತಿಳಿಸಿದರು.
ಗ್ರಾಮ ಘಟಕ ಉಪಾಧ್ಯಕ್ಷ ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ವಿನಯ್, ಸದಸ್ಯರಾದ ಆನಂದ್, ಮಂಜುನಾಥ್, ಮಹೇಶ್, ಸುರೇಶ, ಸ್ವಾಮಿ, ಶಿವರಾಜು, ಸಂಜು, ನಾಗೇಶ್, ಚಿಕ್ಕಮಾದಪ್ಪ, ಸಂತೋಷ, ಸಂಪತ್ತು, ಮಧು, ಮಲೇ ಮಾದಪ್ಪ, ಮಹದೇವಪ್ಪ, ಮಹೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.