ADVERTISEMENT

ಯಳಂದೂರು | ಸೌಜನ್ಯ ಕೊಲೆ ಪ್ರಕರಣ: ಶಿಕ್ಷೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2025, 16:20 IST
Last Updated 11 ಮಾರ್ಚ್ 2025, 16:20 IST
ಸೌಜನ್ಯ ಕೊಲೆ ಪ್ರಕರಣದಲ್ಲಿ‌ ಭಾಗಿಯಾದವರಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಸದಸ್ಯರು ಹಣೆಗೆ ಕಪ್ಪು ಪಟ್ಟಿ ಧರಿಸಿ ಈಚೆಗೆ ಪ್ರತಿಭಟಿಸಿದರು
ಸೌಜನ್ಯ ಕೊಲೆ ಪ್ರಕರಣದಲ್ಲಿ‌ ಭಾಗಿಯಾದವರಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಸದಸ್ಯರು ಹಣೆಗೆ ಕಪ್ಪು ಪಟ್ಟಿ ಧರಿಸಿ ಈಚೆಗೆ ಪ್ರತಿಭಟಿಸಿದರು   

ಯಳಂದೂರು: ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ‌ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕೆಸ್ತೂರು ಗ್ರಾಮದ ಡಾ. ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಸದಸ್ಯರು ಹಣೆಗೆ ಕಪ್ಪು ಪಟ್ಟಿ ಧರಿಸಿ ಈಚೆಗೆ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಸಚಿನ್ ಮಾತನಾಡಿ. ‘ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ನಡೆಯುತ್ತಿವೆ. ಕೊಲೆ ಮಾಡಿದವರಿಗೆ ಸಾಂವಿಧಾನಿಕವಾಗಿ ತಕ್ಕ ಶಿಕ್ಷೆಯಾಗಬೇಕು. ಕೊಲೆ ಪ್ರಕರಣ ಭೇದಿಸಿ ಗರಿಷ್ಠ ಶಿಕ್ಷೆ ವಿಧಿಸಬೇಕು’ ಎಂದರು.

ಉಪಾಧ್ಯಕ್ಷ ಮಹೇಶ್ ಜಿ, ಸಹ ಕಾರ್ಯದರ್ಶಿ ಮಹೇಂದ್ರ, ಖಜಾಂಚಿ ಶಿವಶಂಕರ್, ಪದಾಧಿಕಾರಿಗಳಾದ ಕಿರಣ್ ಜೆ, ರಾಘವ, ಪದಾಧಿಕಾರಿಗಳಾದ ಚಂದನ್, ಪುರುಷೋತ್ತಮ, ಮನೋಜ್, ಮಹೇಂದ್ರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.