ಕೊಳ್ಳೇಗಾಲ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಸರಾದಲ್ಲಿ ಚಾಮುಂಡಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಹೊರತು ದಲಿತ ಮಹಿಳೆಗೂ ಇದಕ್ಕೆ ಅವಕಾಶವಿಲ್ಲ ಎಂಬ ಹೇಳಿಕೆ ಸರಿಯಲ್ಲ. ಇಂತಹ ಹೇಳಿಕೆ ನೀಡಿರುವ ಅವರನ್ನು ಮೊದಲು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ನಗರಸಭೆ ಅಧ್ಯಕ್ಷೆ ರೇಖಾ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ಹೇಳಿರುವ ಹೇಳಿಕೆ ಇಡೀ ರಾಜ್ಯದ ಮಹಿಳೆಯರಿಗೆ ಮಾಡಿದ ಅಪಮಾನವಾಗಿದೆ. ಹಾಗಾಗಿ ಕೂಡಲೇ ಅವರನ್ನು ಬಂಧಿಸಬೇಕು. ಸಾರ್ವಜನಿಕವಾಗಿ ದಲಿತ ಮಹಿಳೆಯರ ಬಗ್ಗೆ ಕೀಳುಮಟ್ಟದಲ್ಲಿ ಹೇಳಿಕೆ ನೀಡಿರುವ ಕೊಳಕು ಮನಸ್ಥಿತಿಯ ಶಾಸಕನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳಿಸಬೇಕು ಎಂದು ಒತ್ತಾಯಿಸಿದರು.
ಕೋಮುಪ್ರಚೋದನೆ ಹೇಳಿಕೆ ನೀಡಿ ಅಶಾಂತಿಗೆ ಕಾರಣರಾಗುತ್ತಿರುವ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು. ಒಬ್ಬ ಶಾಸಕರಾಗಿ ಜನರ ಸಮಸ್ಯೆ ಬಗೆಹರಿಸಲು ಕೆಲಸ ಮಾಡುವ ಬದಲು ಹಿಂದೂ ಮುಸ್ಲಿಮರ ಮಧ್ಯೆ ವಿಷ ಬೀಜ ಬಿತ್ತುವುದನ್ನೇ ಕಸಬು ಮಾಡಿಕೊಂಡಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.