ಗುಂಡ್ಲುಪೇಟೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಪುರಸಭೆ ಸದಸ್ಯ ಎಚ್.ಆರ್.ರಾಜಗೋಪಾಲ್ ಆಕ್ರೋಶ ವ್ಯಕ್ತಪಡಿಸಿದರು.
‘ಸನಾತನ ಧರ್ಮದವರು ಮಾತ್ರ ದಸರಾದಲ್ಲಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡಬೇಕು. ದಲಿತ ಮಹಿಳೆಯರು ಸಹ ಮಾಡಬಾರದು ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿದ್ದಾರೆ. ಬಿಜೆಪಿಯವರು ಜಾತಿ ಆಧಾರದಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪ್ರಸ್ತುತ ದಲಿತ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದು, ಮುಂಚೂಣಿಯಲ್ಲಿದ್ದಾರೆ’ ಎಂದು ತಿಳಿಸಿದರು.
ಈ ವಿಚಾರವಾಗಿ ಬಸನಗೌಡ ಪಾಟೀಲ ಯತ್ನಾಳ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.